CM of Karnataka
15 Oct 2021
@CMOKarnataka
ಹಿರಿಯ ನಟ, ಚಿಂತಕ ಪ್ರೊ ಜಿ.ಕೆ.ಗೋವಿಂದರಾವ್ ನಿಧನಕ್ಕೆ ಮುಖ್ಯಮಂತ್ರಿ @bsbommai ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ರಂಗಭೂಮಿ, ಸಾಹಿತ್ಯ ಕ್ಷೇತ್ರದಲ್ಲಿ ತಮ್ಮ ಛಾಪನ್ನು ಮೂಡಿಸಿದ್ದ ಅವರು, ತಮ್ಮ ಜನಪರ ನಿಲುವಿನಿಂದ ಜನಮಾನಸದಲ್ಲಿ ವಿಶಿಷ್ಟ ಸ್ಥಾನ ಗಳಿಸಿದ್ದರು. ಅವರ ನಿಧನದಿಂದ ಒಬ್ಬ ಅನನ್ಯ ಚಿಂತಕನನ್ನು ನಾಡು ಕಳೆದುಕೊಂಡಿದೆ. ಭಗವಂತ ಮೃತರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ತಮ್ಮ ಶೋಕಸಂದೇಶದಲ್ಲಿ ತಿಳಿಸಿದ್ದಾರೆ.